ಮೆಗ್ಗಾನ್​ ಆಸ್ಪತ್ರೆಯ 4ನೇ ಮಹಡಿಯಿಂದ ಹಾರಿ ಯುವಕ ಆತ್ಮಹತ್ಯೆ

ಶಿವಮೊಗ್ಗ: ಇಲ್ಲಿನ ಸರ್ಕಾರಿ ಮೆಗ್ಗಾನ್​ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಕಟ್ಟಡದಿಂದ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕನಿಗೆ ಕೂಡಲೇ ಆಸ್ಪತ್ರೆ ಸಿಬ್ಬಂದಿ ಚಿಕಿತ್ಸೆ ನೀಡಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಯುವಕ ಮೃತಪಟ್ಟಿದ್ದಾನೆ. ಇನ್ನು ಆತ್ಮಹತ್ಯೆ ಮಾಡಿಕೊಂಡ ಯುವಕನ ಹೆಸರು ಮತ್ತು ವಿಳಾಸ ತಿಳಿದುಬಂದಿಲ್ಲ. ಸ್ಥಳಕ್ಕೆ ದೊಡ್ಡಪೇಟೆ ಪೊಲೀಸರು ಭೇಟಿ ನೀಡಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv