ಅನಾರೋಗ್ಯದಿಂದ ಬಳಲುತ್ತಿದ್ದ ಜಿಪಂ ಸದಸ್ಯ ನಿಧನ

ರಾಯಚೂರು: ಜಾಲಹಳ್ಳಿ ಕ್ಷೇತ್ರದ ಜಿಪಂ ಸದಸ್ಯ ಗುರುರಾಜ್ ದೇಸಾಯಿ (68) ಮೃತಪಟ್ಟಿದ್ದಾರೆ. ದೇವದುರ್ಗ ತಾಲೂಕಿನ ಜಾಲಹಳ್ಳಿ ಜಿಪಂ ಸದಸ್ಯರಾಗಿದ್ದ ಇವರು, ಹಲವು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಸ್ವಗ್ರಾಮ ಜಾಲಹಳ್ಳಿಯಲ್ಲಿ ಇಂದು ಅವರ ಅಂತ್ಯ ಸಂಸ್ಕಾರ ನಡೆಯಲಿದೆ.